ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಜೀವನಿ ಯೋಜನೆಗೆ ಕುಟುಂಬಸ್ಥರ ನೋಂದಣಿ ಮಾಡುವ ಕುರಿತಂತೆ ಮಾಹಿತಿ ನೀಡಿದ್ದು, ಅದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ.
ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆ ಜಾರಿಗೆ ತಂದಿದ್ದು, KASS ಯೋಜನೆಯು ರಾಜ್ಯ ಸರ್ಕಾರದ ನೌಕರರಿಗೆ ಐಚ್ಛಿಕವಾಗಿದ್ದು, ಯೋಜನೆಯಡಿ ಸರ್ಕಾರಿ ನೌಕರರು ವೈದ್ಯಕೀಯ ಸೌಲಭ್ಯ ಪಡೆಯಲು ಹೊರಗುಳಿಯಲು (Opt in / Opt out) ಆಯ್ಕೆ / ಇಚ್ಛೆ ವ್ಯಕ್ತಪಡಿಸುವ ಕುರಿತಂತೆ ಸಂಪೂರ್ಣ ಮಾಹಿತಿ ಒದಗಿಸಲಾಗಿದೆ.
ಈ ಯೋಜನೆಯು ಎಲ್ಲಾ ಅರ್ಹ ಸರ್ಕಾರಿ ನೌಕರರಿಗೆ ಅನ್ವಯವಾಗಲಿದ್ದು ಯೋಜನೆಯ ಸೌಲಭ್ಯ ಪಡೆಯುವುದು ಐಚ್ಛಿಕವಾಗಿದ್ದು (Optional), ಕಡ್ಡಾಯ(Mandatory) ಆಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರಿ ನೌಕರರು ಯೋಜನೆಯ ಸದುಪಯೋಗ ಪಡೆಯಲು ಇಚ್ಚಿಸಿದಲ್ಲಿ ಮಾತ್ರ ತನ್ನ ಆಯ್ಕೆಯನ್ನು ಸೂಚಿಸಬಹುದಾಗಿದೆ. ಇಚ್ಛೆ ಇಲ್ಲದ ಪಕ್ಷದಲ್ಲಿಯೂ ಸಹ ನಿಗದಿತ ನಮೂನೆಯಲ್ಲಿ ತಿಳಿಸಬಹುದಾಗಿದೆ.
ವಿವಿಧ ಘೋಷಣಾ ಪತ್ರಗಳನ್ನು ಹಾಗೂ ನೋಂದಾವಣೆ ಕಾರ್ಯವಿಧಾನಗಳನ್ನು ನಿರ್ಧಿಷ್ಟಪಡಿಸಲಾಗಿದೆ. ಇವುಗಳನ್ನು ಎಲ್ಲಾ ಸರ್ಕಾರಿ ನೌಕರರು ಹಾಗೂ ಡಿಡಿಓಗಳು (DDOs) ತಪ್ಪದೇ ಅನುಸರಿಸತಕ್ಕದ್ದು. HRMS ತಂತ್ರಜ್ಞಾನದಲ್ಲಿ ಡಿಡಿಓಗಳು ಅರ್ಜಿಗಳನ್ನು ಅಪ್ ಲೋಡ್ ಮಾಡಲು ಕ್ರಮವಹಿಸುವುದು.
ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ : ವಿಡಿಯೋ ನೋಡಿ