ದಾವಣಗೆರೆ : ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆ ಪ್ರಕರಣದ ಸಂಬಂಧ ಈಗಾಗಲೇ 10 ಮಂದಿ ಆರೋಪಿಗಳು ಹೊಳಲ್ಕೆರೆ ಠಾಣೆ ಪೊಲೀಸರ ಎದುರು ಶರಣಾಗಿದ್ದಾರೆ. ಪ್ರಕರಣ ಸಂಬಂಧ 12 ಜನರ ವಿರುದ್ಧ ದಾವಣಗೆರೆಯ ವಿದ್ಯಾನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಇದೀಗ ಪೊಲೀಸರು ಮತ್ತೆ 10 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಪೀಟ್ ಕ್ಲಬ್ ಗೆ ನುಗ್ಗೆ ಕಣ್ಣಿಗೆ ಖಾರದ ಪುಡಿ ಎರಚಿ ಕಣುಮಾ ಹತ್ಯೆ ಮಾಡಲಾಗಿದೆ. ಬಳಿಕ ಹತ್ಯೆ ಮಾಡಿದ ವಿಡಿಯೋವನ್ನು ಆರೋಪಿಗಳು ವೈರಲ್ ಮಾಡಿದ್ದರು. ಮೇ 5 ರಂದು ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿತ್ತು.ಸೋಮೇಶ್ವರ ಆಸ್ಪತ್ರೆಯ ಮುಂದೆ ಇಸ್ಪೀಟ್ ಕ್ಲಬ್ ನಲ್ಲಿ ಈ ಒಂದು ಘಟನೆ ನಡೆದಿತ್ತು. ಚವಳಿ ಸಂತೋಷ್ ಸೇರಿ 10 ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು. ಇದೀಗ ಮತ್ತೆ 10 ಆರೋಪಿಗಳನ್ನು ದಾವಣಗೆರೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ಹಿನ್ನೆಲೆ?
ಕಳೆದ 5ನೇ ತಾರೀಕಿನಂದು ಸಂಜೆ 5ರಿಂದ 5.30 ಗಂಟೆಯ ಮಧ್ಯದ ಅವಧಿಯಲ್ಲಿ ದಾವಣಗೆರೆ ನಗರ ಉಪ ವಿಭಾಗದ ವಿದ್ಯಾನಗರ ಪೊಲೀಸ್ ಠಾಣಾ ಸರಹದ್ದಿನ ದಾವಣಗೆರೆಯ ಹದಡಿ ರಸ್ತೆಯ ಸೋಮೇಶ್ವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗದ ಪವರ್ ಸ್ಪೋರ್ಟ್ಸ ಅಂಡ್ ರಿಕ್ರಿಯೇಷನ್ ಕ್ಲಬ್ ಕಟ್ಟಡದಲ್ಲಿ ಕಣುಮಾ ಅಲಿಯಾಸ್ ಸಂತೋಷ್ ಕುಮಾರ್ ಇದ್ದರು.ಈ ವೇಳೆ ಆರೋಪಿತರಾದ ಸಂತೋಷ ಅಲಿಯಾಸ್ ಚಾವಳಿ ಸಂತು ಮತ್ತು ಇತರರು ಸೇರಿ ಸಂತೋಷ ಕುಮಾರ ಕೆ ಅಲಿಯಾಸ್ ಕಣುಮಾನನ್ನು ಹರಿತವಾದ ಆಯುಧಗಳಿಂದ ಹೊಡೆದು ಕೊಲೆ ಮಾಡಿದ್ದರು. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪಕರಣ ದಾಖಲಾಗಿತ್ತು.
ಈ ಕೇಸ್ ನಲ್ಲಿ ಕೇಸಿನಲ್ಲಿ ಆರೋಪಿತರನ್ನು ಪತ್ತೆ ಮಾಡಲು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ ಸಂತೋಷ, ಜಿ. ಮಂಜುನಾಥ ರವರ ಮಾರ್ಗದರ್ಶನದಲ್ಲಿ ದಾವಣಗೆರೆ ನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಶರಣಬಸವೇಶ್ವರ ಬಿ. ಅವರ ನೇತೃತ್ವದಲ್ಲಿ 5 ಪ್ರತ್ಯೇಕ ತಂಡಗಳನ್ನು ರಚನೆ ಮಾಡಲಾಗಿತ್ತು.ಮೃತ ಸಂತೋಷ್ ಕುಮಾರ್ ಪತ್ನಿ ಶ್ರುತಿ ದೂರಿನ ಮೇರೆಗೆ ಆರೋಪಿಗಳಾದ ಕಾರ್ತಿಕ್(22), ಚವಳಿ ಸಂತು(30), ನವೀನ್(26) ನವೀನ್(26), ಗುಂಡಪ್ಪ(32), ಬಸವರಾಜ್(22), ಹನುಮಂತಪ್ಪ(23), ಗಿಡ್ಡ ವಿಜಿ(27), ಚಿಕ್ಕಮ್ಮನಹಳ್ಳಿ ಶಿವು(30), ಕಡ್ಡಿ ರಾಘು(27), ಪ್ರಶಾಂತ್(28) ಮತ್ತು ನಿಟ್ಟುವಳ್ಳಿಯ ಗಣಿ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.ಇದೀಗ ಮತ್ತೆ 10 ಆರೋಪಿಗಳನ್ನು ದಾವಣಗೆರೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.