ತುಮಕೂರು: ಇ-ಖಾತಾ ನೀಡಲು ರೂ.6,500 ಲಂಚಕ್ಕೆ ಬೇಡಿಕೆ ಇಟ್ಟು, ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಬಲೆಗೆ ಪಿಡಿಎ ಹಾಗೂ ಬಿಲ್ ಕಲೆಕ್ಟರ್ ಬಿದ್ದಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೋಡ್ಲಾಪುರ ಗ್ರಾಮ ಪಂಚಾಯ್ತಿಯ ಪಿಡಿಓ ಪುಂಡಪ್ಪ ಹಾಗೂ ಬಿಲ್ ಕಲೆಕ್ಟರ್ ಹನುಮಂತರಾಯಪ್ಪ ಎಂಬುವರು ವೀರನಗೇನಹಳ್ಳಿಯ ಕೆ.ಹೆಚ್ ಆನಂದ್ ಕುಮಾರ್ ಎಂಬುವರಿಗೆ ಇ-ಖಾತಾ ನೀಡಲು 6,500 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ತುಮಕೂರು ಲೋಕಾಯುಕ್ತ ಕಚೇರಿಗೆ ತೆರಳಿ ಕೆ.ಹೆಚ್ ಆನಂದ್ ಕುಮಾರ್ ಅವರು ಕೋಡ್ಲಾಪುರ ಗ್ರಾಮ ಪಂಚಾಯ್ತಿ ಪಿಡಿಓ, ಬಿಲ್ ಕಲೆಕ್ಟರ್ ವಿರುದ್ಧ ದೂರು ನೀಡಿದ್ದರು.
ಇಂದು ಕೆ.ಹೆಚ್ ಆನಂದ್ ಕುಮಾರ್ ಅವರಿಂದ ಇ-ಖಾತಾ ನೀಡಲು ರೂ.6,500 ಲಂಚ ಪಡೆಯುತ್ತಿದ್ದಂತ ವೇಳೆಯಲ್ಲಿ ತುಮಕೂರು ಲೋಕಾಯುಕ್ತ ಡಿವೈಎಸ್ಪಿ ಶಿವರುದ್ರಪ್ಪ ಮೇಟಿ ನೇತೃತ್ವದಲ್ಲಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ರೆಡ್ ಹ್ಯಾಂಡ್ ಆಗಿ ಕೋಡ್ಲಾಪುರ ಗ್ರಾಮ ಪಂಚಾಯ್ತಿ ಪಿಡಿಒ ಪಂಡಪ್ಪ ಹಾಗೂ ಬಿಲ್ ಕಲೆಕ್ಟರ್ ಹನುಮಂತರಾಯಪ್ಪ ಎಂಬುವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದೆ.
ಆಪರೇಷನ್ ಕೆಲ್ಲರ್: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆಯ ಎನ್ ಕೌಂಟರ್ ಗೆ ಮೂವರು ಉಗ್ರರು ಬಲಿ