ಬೆಂಗಳೂರು : ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯು ಈಗಾಗಲೇ ಆರಂಭಗೊಂಡಿದ್ದು, ಗಣತಿದಾರರು ಮನೆ- ಮನೆಗಳಿಗೆ ಭೇಟಿ ನೀಡುವ ವೇಳೆ ಪರಿಶಿಷ್ಟ ಜಾತಿಯವರು ತಮ್ಮ ಮೂಲ ಜಾತಿ, ಶಿಕ್ಷಣ, ವರಮಾನ, ಉದ್ಯೋಗ ಮತ್ತು ಇನ್ನಿತರ ಪ್ರಮುಖ ಮಾಹಿತಿಯನ್ನು ತಪ್ಪದೇ ನೀಡಬೇಕು ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಮೊದಲನೇ ಹಂತದಲ್ಲಿ ಮೇ 05 ರಿಂದ ಮೇ 17ರ ವರೆಗೆ ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಎರಡನೇ ಹಂತದಲ್ಲಿ ಮೇ 19 ರಿಂದ ಮೇ 21ರ ವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಮೂರನೇ ಹಂತದಲ್ಲಿ ಮೇ 19 ರಿಂದ ಮೇ 23ರ ವರೆಗೆ ಆನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಸಮೀಕ್ಷೆ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ – ಕಂಟ್ರೋಲ್ ರೂಂ – 9482300400 ಹಾಗೂ ಜಸ್ಟಿಸ್ ನಾಗಮೋಹನ ದಾಸ್ ಆಯೋಗ (ಒಳ ಮೀಸಲಾತಿ ಕುರಿತು) – 9481359000 ಕ್ಕೆ ಸಂಪರ್ಕಿಸಬಹುದಾಗಿದೆ.