ಮೈಸೂರು : ಒಂದೆಡೆ ಸರ್ಕಾರ ಸಾಧನಾ ಸಮಾವೇಶ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸರ್ಕಾರ ಸಾಧನಾ ಸಮಾವೇಶ ಮಾಡುತ್ತಿದೆ ಇದರ ಮಧ್ಯ ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ರಾಜ್ಯ ಸಚಿವ ಸಂಪುಟ ಪುನಃ ರಚನೆ ಕುರಿತಂತೆ ಸುಳಿವು ನೀಡಿದ್ದಾರೆ.
ಕಾಂಗ್ರೆಸ್ನ ಹಿರಿಯ ಶಾಸಕರಿಗೆ ಸಚಿವ ಸ್ಥಾನದ ವಿಚಾರವಾಗಿ ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮಾತನಾಡಿ, ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಕಾರ್ಯಕರ್ತರಿಗಂತು ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ಸಂಪುಟ ಪುನಾರಚನೆಯ ಕುರಿತು ಶಾಸಕ ತನ್ವೀರ್ ಸೇಠ್ ಸುಳಿವು ನೀಡಿದ್ದಾರೆ.