ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು, ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಂಬದೇವರಹಟ್ಟಿ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.
ಮೃತ ಯುವಕರನ್ನು ರಂಗಸ್ವಾಮಿ (21), ಪ್ರವೀಣ್( 14) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಆದರೆ ಇವರ ಜೊತೆಯಲ್ಲಿದ್ದ ರಮೇಶ (22) ಆಕಸ್ಮಿಕವಾಗಿ ಎನ್ನುವ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಕ್ಷಣ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ನೋಡಿದರೂ ಸಹ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸ್ಥಳಕ್ಕೆ ಬಂದಿಲ್ಲ.
ಇದರಿಂದ ಮೃತರ ಸಂಬಂಧಿಕರು ಜಿಲ್ಲಾ ಹಾಗೂ ತಾಲೂಕು ಸಾರ್ವಜನಿಕ ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು. ಈ ಸಂಬಂಧ ಹೊಳಲ್ಕೆರೆ ತಹಸಿಲ್ದಾರ್ ಬೀಬಿ ಫಾತಿಮಾ, ಸಿಪಿಐ ಚಿಕ್ಕಣ್ಣ, ಪಿಎಸ್ ಐ ಸಚಿನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.