ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಗ್ ಶಾಕ್ ಅನ್ನು ಲೋಕಾಯುಕ್ತ ಅಧಿಕಾರಿಗಳು ನೀಡಿದ್ದು, ರಾಜ್ಯದ ನಾನಾ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಲಬುರಗಿ, ಯಾದಗಿರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ. ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿ ತಹಶೀಲ್ದಾರ್ ಮನೆ ಹಾಗೂ ಯಾದಗಿರಿ ಜಿಲ್ಲೆಯ ಲೋಕಾಯುಕ್ತ ಶಹಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ತುಮಕೂರಿನಲ್ಲಿ ನಿರ್ಮಿತ ಕೇಂದ್ರದ ಎಂಡಿ ರಾಜಶೇಖರ್ ಹಾಗೂ ಸಹೋದರರ ಮನೆ ಮೇಲೆ ಕೂಡ ಅಧಿಕಾರಿಗಳು ದಾಳಿ ನಡಸಿದ್ದಾರೆ. ಒಟ್ಟು ಏಳು ಅಧಿಕಾರಿಗಳು ಮನೆ ಕಚೇರಿ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಯನ್ನು ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ಹಿನ್ನಲೆಯಲ್ಲಿ ದೂರುಗಳು ಬಂದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ದ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎನ್ನಲಾಗಿದೆ.