ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ನಾದಿರ್ ಗ್ರಾಮದಲ್ಲಿ ಗುರುವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಪರಿಚಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಮೂವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳಾದ ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. 48 ಗಂಟೆಗಳ ಒಳಗೆ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ. ಶೋಪಿಯಾನ್ ಜಿಲ್ಲೆಯ ಕೆಲ್ಲರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿದ ಎರಡು ದಿನಗಳ ನಂತರ ಇದು ನಡೆದಿದೆ.