ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಇಂದಿನಿಂದ ಜಾರಿಯಾಗಲಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ವಹಿಸಿಕೊಳ್ಳುವವರೆಗೆ ಬಿಬಿಎಂಪಿ ಮುಂದುವರಿಯಲಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಜಾರಿಯಾದ ಮೇಲೆ ಮುಖ್ಯಮಂತ್ರಿಯವರ ನೇತೃತ್ವದ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (ಜಿಬಿಎ) 120 ದಿನಗಳಲ್ಲಿ ರಚನೆಯಾಗಲಿದೆ. ಆಡಳಿತಾಧಿಕಾರಿ ನೇಮಕಗೊಳ್ಳಲಿದ್ದಾರೆ.