ಮಂಗಳೂರು : ಇತ್ತೀಚಿಗೆ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಮಂಗಳೂರಿನ ಬಜ್ಪೆಯಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಳಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನ ಕಳವಾರು ಗ್ರಾಮದ ಆಶ್ರಯ ಕಾಲನಿ ನಿವಾಸಿ ಅಜರುದ್ದೀನ್ (29), ಬಜ್ಪೆ, ಭಟ್ರಕೆರೆ, ಉಸ್ಮಾನಿಯಾ ಮಸೀದಿ ಬಳಿಯ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24) ಹಾಗೂ ಬಂಟ್ವಾಳದ ಫರಂಗಿಪೇಟೆಯ ಕುಂಪನಮಜಲು ರಸ್ತೆ ನಿವಾಸಿ ನೌಷಾದ್ (39) ದಸ್ತಗಿರಿಯಾದ ಆರೋಪಿಗಳು.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇವರ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದಿಬ್ಬರಾದ ಅಬ್ದುಲ್ ಖಾದರ್ ಮತ್ತು ನೌಷದ್ ಎಂಬವರನ್ನು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣದ ತನಿಖೆಯು ಮುಂದುವರೆದಿದ್ದು, ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.