Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತ `ವೇಳಾಪಟ್ಟಿ’ ಪ್ರಕಟ, ಏ.30ರಿಂದ ಮೇ.13ರವರೆಗೆ ಎಕ್ಸಾಂ.!

10/04/2026 5:29 AM

GOOD NEWS : ಪೊಲೀಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 1,000 PSI, 8,000 ಕಾನ್ಸ್‌ ಟೇಬಲ್ ಹುದ್ದೆಗಳ ನೇಮಕಾತಿ.!

10/04/2026 5:21 AM

ರಾಜ್ಯದಲ್ಲಿ ಈ ಬಾರಿ `ದ್ವಿತೀಯ ಪಿಯುಸಿ-ಪರೀಕ್ಷೆ-3′ ಇರುವುದಿಲ್ಲ : ಸಚಿವ ಮಧು ಬಂಗಾರಪ್ಪ

10/04/2026 5:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತಾ ಅವಧಿ 3 ತಿಂಗಳು ವಿಸ್ತರಣೆ
KARNATAKA

GOOD NEWS: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತಾ ಅವಧಿ 3 ತಿಂಗಳು ವಿಸ್ತರಣೆ

By kannadanewsnow0916/05/2025 6:04 AM

ಬೆಂಗಳೂರು: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನಗಳಿಗೆ ಬಿ-ಖಾತಾ ವಿತರಣೆಗೆ ಸರ್ಕಾರ ನಿರ್ಧರಿಸಿತ್ತು. ಈ ಅವಧಿಯನ್ನು ಮೂರು ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ.

ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ.

ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ @byrathi_suresh ತಿಳಿಸಿದ್ದಾರೆ. pic.twitter.com/1KCvXMPRgP

— DIPR Karnataka (@KarnatakaVarthe) May 15, 2025

ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿರುವ ಅವರು, ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ-ಖಾತ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು ಎಂದಿದ್ದಾರೆ.

ಇದರನ್ವಯ ನಾಗರಿಕರಿಗೆ ಒಂದು ಬಾರಿಯ ಅವಕಾಶವನ್ನು ನೀಡಲಾಗಿತ್ತು. ನಾಗರಿಕರು ನಿಗದಿತ ಶುಲ್ಕಗಳನ್ನು ಪಾವತಿ ಮಾಡಿ ತಮ್ಮ ಕಟ್ಟಡಗಳಿಗೆ ಬಿ-ಖಾತಾ ಪಡೆದುಕೊಳ್ಳಬಹುದಾಗಿದೆ. ಈ ಅವಕಾಶವನ್ನು ಮೇ ತಿಂಗಳ 10 ರ ವೇಳೆಗೆ ಬಿ-ಖಾತಾ ಪಡೆದುಕೊಳ್ಳಲು ಸಮಯ ನೀಡಲಾಗಿತ್ತು.

ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಪ್ರದೇಶಗಳಲ್ಲಿ 30 ಲಕ್ಷಕ್ಕೂ ಅಧಿಕ ಇಂತಹ ಅನಧಿಕೃತ ಕಟ್ಟಡಗಳು/ಮನೆಗಳು/ನಿವೇಶನಗಳಿವೆ ಎಂದು ಅಂದಾಜಿಸಲಾಗಿದೆ. ಸರ್ಕಾರ ಒಂದು ಬಾರಿಯ ಅವಕಾಶ ನೀಡಿದ ನಂತರ ನಾಗರಿಕರು ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿ ತಮ್ಮ ಆಸ್ತಿಗಳಿಗೆ ಬಿ-ಖಾತಾ ಪಡೆದುಕೊಳ್ಳುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

2 ಲಕ್ಷ ಬಿ-ಖಾತಾ ವಿತರಣೆ

ಸರ್ಕಾರ ನೀಡಿದ ಅವಕಾಶವನ್ನು ಬಳಸಿಕೊಂಡಿರುವ ಸುಮಾರು 10 ಲಕ್ಷ ಆಸ್ತಿಗಳಿಗೆ ಬಿ-ಖಾತಾ ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಈ ಪೈಕಿ 2 ಲಕ್ಷ ಆಸ್ತಿಗಳಿಗೆ ಬಿ-ಖಾತೆಗಳನ್ನು ವಿತರಿಸಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆ ನಡೆಯುತ್ತಿದ್ದು, ಹಂತಹಂತವಾಗಿ ಬಿ-ಖಾತಾ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇನ್ನೂ ಮೂರು ತಿಂಗಳು ವಿಸ್ತರಣೆ

ಸರ್ಕಾರದ ಈ ನಾಗರಿಕ ಸ್ನೇಹಿ ಸೌಲಭ್ಯವನ್ನು ಇನ್ನೂ ಹೆಚ್ಚಿನ ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ-ಖಾತಾ ವಿತರಣೆ ಪ್ರಕ್ರಿಯೆಯನ್ನು ಇನ್ನೂ ಮೂರು ತಿಂಗಳ ಕಾಲ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಬಿ.ಎಸ್.ಸುರೇಶ ತಿಳಿಸಿದ್ದಾರೆ.

ಜಿಪಿಎ, ಕರಾರುದಾರರಿಗೂ ಸೌಲಭ್ಯ

ಇನ್ನು ನಿವೇಶನ ಅಥವಾ ಕಟ್ಟಡಗಳನ್ನು ಖರೀದಿಸಲು ಮುಂದಾಗಿ ಜಿಪಿಎ ಅಥವಾ ಅಗ್ರೀಮೆಂಟ್ ಮಾಡಿಕೊಂಡಿರುವ ನಾಗರಿಕರಿಗೂ ಬಿ-ಖಾತಾ ವಿತರಣೆಗೆ ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸಂಬಂಧ ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದರಿಂದ ಜಿಪಿಎ ಅಥವಾ ಕರಾರುದಾರರಿಗೂ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

Watch Video: ಪ್ಲೀಸ್ ಭಾರತೀಯ ಸೇನೆ ಮುಂದೆ ಶರಣಾಗು: ಭಯೋತ್ಪಾದಕ ಪುತ್ರನನ್ನು ತಾಯಿ ಬೇಡಿಕೊಂಡ ವೀಡಿಯೋ ವೈರಲ್

BIG NEWS : ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : `ವಾಟ್ಸಪ್’ನಲ್ಲೇ ಸಿಗಲಿವೆ ಗ್ರಾಮಪಂಚಾಯಿತಿಯ ಈ ಎಲ್ಲಾ ಸೇವೆಗಳು | WATCH VIDEO

Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತ `ವೇಳಾಪಟ್ಟಿ’ ಪ್ರಕಟ, ಏ.30ರಿಂದ ಮೇ.13ರವರೆಗೆ ಎಕ್ಸಾಂ.!

10/04/2026 5:29 AM2 Mins Read

GOOD NEWS : ಪೊಲೀಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 1,000 PSI, 8,000 ಕಾನ್ಸ್‌ ಟೇಬಲ್ ಹುದ್ದೆಗಳ ನೇಮಕಾತಿ.!

10/04/2026 5:21 AM1 Min Read

ರಾಜ್ಯದಲ್ಲಿ ಈ ಬಾರಿ `ದ್ವಿತೀಯ ಪಿಯುಸಿ-ಪರೀಕ್ಷೆ-3′ ಇರುವುದಿಲ್ಲ : ಸಚಿವ ಮಧು ಬಂಗಾರಪ್ಪ

10/04/2026 5:20 AM1 Min Read
Recent News

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತ `ವೇಳಾಪಟ್ಟಿ’ ಪ್ರಕಟ, ಏ.30ರಿಂದ ಮೇ.13ರವರೆಗೆ ಎಕ್ಸಾಂ.!

10/04/2026 5:29 AM

GOOD NEWS : ಪೊಲೀಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 1,000 PSI, 8,000 ಕಾನ್ಸ್‌ ಟೇಬಲ್ ಹುದ್ದೆಗಳ ನೇಮಕಾತಿ.!

10/04/2026 5:21 AM

ರಾಜ್ಯದಲ್ಲಿ ಈ ಬಾರಿ `ದ್ವಿತೀಯ ಪಿಯುಸಿ-ಪರೀಕ್ಷೆ-3′ ಇರುವುದಿಲ್ಲ : ಸಚಿವ ಮಧು ಬಂಗಾರಪ್ಪ

10/04/2026 5:20 AM

BIG NEWS : ಶಾಲೆಗಳಲ್ಲಿ ಪಠ್ಯಪುಸ್ತಕಗಳಿಲ್ಲದೆಯೇ `ತೃತೀಯ ಭಾಷೆ’ ಕಲಿಕೆ ಆರಂಭಕ್ಕೆ `CBSE’ ಆದೇಶ!

10/04/2026 5:19 AM
State News
KARNATAKA

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತ `ವೇಳಾಪಟ್ಟಿ’ ಪ್ರಕಟ, ಏ.30ರಿಂದ ಮೇ.13ರವರೆಗೆ ಎಕ್ಸಾಂ.!

By kannadanewsnow5710/04/2026 5:29 AM KARNATAKA 2 Mins Read

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.…

GOOD NEWS : ಪೊಲೀಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 1,000 PSI, 8,000 ಕಾನ್ಸ್‌ ಟೇಬಲ್ ಹುದ್ದೆಗಳ ನೇಮಕಾತಿ.!

10/04/2026 5:21 AM

ರಾಜ್ಯದಲ್ಲಿ ಈ ಬಾರಿ `ದ್ವಿತೀಯ ಪಿಯುಸಿ-ಪರೀಕ್ಷೆ-3′ ಇರುವುದಿಲ್ಲ : ಸಚಿವ ಮಧು ಬಂಗಾರಪ್ಪ

10/04/2026 5:20 AM

BIG NEWS : ಶಾಲೆಗಳಲ್ಲಿ ಪಠ್ಯಪುಸ್ತಕಗಳಿಲ್ಲದೆಯೇ `ತೃತೀಯ ಭಾಷೆ’ ಕಲಿಕೆ ಆರಂಭಕ್ಕೆ `CBSE’ ಆದೇಶ!

10/04/2026 5:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.