ಬೆಂಗಳೂರು :ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
https://shp.karnataka.gov.in/bcwd ಅರ್ಜಿಯನ್ನು ಸಲ್ಲಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.06.2025. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ .bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005