ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಬಳಕೆಯ ಮಿತಿಯಲ್ಲಿ ಪ್ರತಿ ಗೃಹಬಳಕೆ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ(ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳ ಬಳಕೆ ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರ ಆದೇಶಿಸಿದೆ.
ಈ ಯೋಜನೆಯಡಿ ಗ್ರಾಹಕರು https://sevasindhugs.Karnataka.gov.in/ ನಲ್ಲಿ ನೋಂದಾಯಿಸಿಕೊಳ್ಳಬೇಕು. 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಸಂಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕು.
ಗ್ರಾಹಕರು ಮಂಜೂರಾದ ಲೋಡ್‌ಗಿಂತ ಅಧಿಕ ವಿದ್ಯುತ್ ಬಳಕೆ ಮಾಡಿದಲ್ಲಿ ಜೆಸ್ಕಾಂನಿAದ ನಿಯಮಾನುಸಾರ ದಂಡ ವಿಧಿಸಲಾಗುವುದು. ಆದ್ದರಿಂದ ಗ್ರಾಹಕರು ಹೆಚ್ಚಿನ ಲೋಡ್ ಅನ್ನು ಸಕ್ರಮಗೊಳಿಸಲು ಸಂಬAಧಪಟ್ಟ ಜೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಬೇಕೆAದು ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.