ಬೆಂಗಳೂರು: ವಿದೇಶದಿಂದ ಆಮದು ಮಾಡಿಕೊಳ್ಳಲಾದ ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಚಾಕೋಲೆಟ್ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದೆ.
ಹೌದು, ಆಮದು ಮಾಡಿಕೊಂಡ ಚಾಕೊಲೇಟ್‌ಗಳಲ್ಲಿ ಆಲ್ಕೋಹಾಲ್ ಅಂಶ ಇರುವ ಬಗ್ಗೆ ಕಳವಳ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ರಾಜ್ಯದಾದ್ಯಂತ ಆಮದು ಮಾಡಿಕೊಂಡ ಚಾಕೊಲೇಟ್‌ಗಳ ಮಾದರಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ.
ಲೇಬಲ್ ಗಳ ಮೇಲೆ ಗಮನ ಹರಿಸುತ್ತಿರುವ ಇಲಾಖೆ ವಿಶೇಷವಾಗಿ ಆಲ್ಕೋಹಾಲ್ ಅಂಶ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಬಹಿರಂಗಪಡಿಸದೆ ಮಾರಾಟವಾಗುವ ಉತ್ಪನ್ನಗಳಿಗೆ ಸಂಬಂಧಿಸಿದಂತೆ ನಿಗಾ ವಹಿಸಿದೆ. ರಾಷ್ಟ್ರೀಯ ವಾರ್ಷಿಕ ಕಣ್ಗಾಗಲು ಯೋಜನೆಯ ಭಾಗವಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ನಿರ್ದೇಶನ ಪಡೆದ ಬಳಿಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಈ ಅಭಿಯಾನ ಆರಂಭಿಸಿದೆ.