ಧಾರವಾಡ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 2024-25 ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ ಮತ್ತು ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 90 ದಿನಗಳ ವಸತಿಯುತ ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಮೂಲಕ ಮೇ 23, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ https://dom.karnataka.gov.in/ ಮೂಲಕ ಅಥವಾ ಸಹಾಯವಾಣಿ ಸಂಖ್ಯೆ:8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.