ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾದ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಬೈಪಾಸ್ ನ ಸಿಲ್ಕ್ ಫ್ಯಾಕ್ಟರಿ ಬಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್ ನಲ್ಲಿ ತೆರಳುತ್ತಿದ್ದಂತವರಿಗೆ ಡಿಕ್ಕಿಯಾಗಿದೆ. ಈ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಮತ್ತು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಈ ವಿಷಯ ತಿಳಿದು ವಿಜಯಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೈಕ್ ಸವಾರರಿಗೆ ಡಿಕ್ಕಿಯಾಗಿ ಪರಾರಿಯಾಗಿರುವಂತ ಅಪರಿಚಿತ ವಾಹನದ ಚಾಲಕನ ಬಂಧನಕ್ಕೆ ಬಲೆ ಬೀಸಿದ್ದಾರೆ.
ALERT : ಸಾರ್ವಜನಿಕರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಹೆಸರಿನಲ್ಲಿ `ಸಿಮ್ ಕಾರ್ಡ್’ ಬಳಸುತ್ತಾರೆ ವಂಚಕರು.!