ನವದೆಹಲಿ: ಪಾಕಿಸ್ತಾನದ ಒಳಗೆ 100 ಕಿ.ಮೀ. ದೂರದ ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ಸೇನೆ ನಾಶಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು ಉರಿ, ಪುಲ್ವಾಮಾ ಮತ್ತು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಕ್ತ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಶನಿವಾರ ಶ್ಲಾಘಿಸಿದ್ದಾರೆ.
ರಾಷ್ಟ್ರೀಯ ಭದ್ರತೆಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. “ಅಧಿಕಾರ ವಹಿಸಿಕೊಂಡಾಗಿನಿಂದ, ಪ್ರಧಾನಿ ಮೋದಿ ದೇಶದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಗಳಾದ ಉರಿ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಿಗೆ ಸೂಕ್ತ ಉತ್ತರ ನೀಡಿದ್ದಾರೆ. ಈ ಬಾರಿ, ಆಪರೇಷನ್ ಸಿಂಧೂರ್ ಅಡಿಯಲ್ಲಿ, ಪಾಕಿಸ್ತಾನದಲ್ಲಿರುವ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾದಂತಹ ಭಯೋತ್ಪಾದಕ ಸಂಘಟನೆಗಳ ಪ್ರಧಾನ ಕಚೇರಿಯನ್ನು ನಾಶಪಡಿಸಲಾಯಿತು ಎಂದರು.
ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ಭಾರತೀಯ ಸಶಸ್ತ್ರ ಪಡೆಗಳು ಶತ್ರು ಪ್ರದೇಶದೊಳಗೆ 100 ಕಿಲೋಮೀಟರ್ ಒಳಗೆ ಹೋಗಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿದವು. ಭಯೋತ್ಪಾದಕರು ತಮ್ಮ ಬೆದರಿಕೆಗಳು ನಮ್ಮನ್ನು ಬೆದರಿಸಬಹುದು ಎಂದು ಭಾವಿಸಿದ್ದರು, ಆದರೆ ನಮ್ಮ ಪಡೆಗಳ ಮೂರು ವಿಭಾಗಗಳು ಅವರು ಊಹಿಸಿದ್ದಕ್ಕಿಂತ ಬಲವಾದ ಪ್ರತಿಕ್ರಿಯೆಯನ್ನು ನೀಡಿತು ಎಂದರು.
ALERT : ಸಾರ್ವಜನಿಕರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಹೆಸರಿನಲ್ಲಿ `ಸಿಮ್ ಕಾರ್ಡ್’ ಬಳಸುತ್ತಾರೆ ವಂಚಕರು.!