ಕೋಲಾರ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು, ಅಲ್ಲಲ್ಲಿ ವಿದ್ಯುತ್ ಅವಘಡಗಳು ಸೇರಿದಂತೆ ಅನೇಕ ಅವಾಂತರ ಸೃಷ್ಟಿಯಾಗುತ್ತಿವೆ. ಹಾಗಾಗಿ ಸಾರ್ವಜನಿಕರು ಗಾಳಿ ಮಳೆಯಲ್ಲಿ ಆದಷ್ಟು ಎಚ್ಚರದಿಂದರಬೇಕು. ಇದೀಗ ಗಾಳಿ ಮಳೆಯಿಂದ ವಿದ್ಯುತ್ ಕಂಬ ನೆಲಕ್ಕುರಳಿದ್ದನ್ನು ಗಮನಿಸದೇ ಬೈಕ್ ಚಾಲನೆ ಮಾಡಿದ ಸಾರಿಗೆ ನೌಕರ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಮೃತರನ್ನು ಗ್ರಾಮದ ರೆಡ್ಡಪ್ಪ (58) ಎಂದು ತಿಳಿದುಬಂದಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಜೇಂದ್ರ ಹಳ್ಳಿಯಲ್ಲಿಂದು ಮುಂಜಾನೆ ಈ ಘಟನೆ ನಡೆದಿದ್ದು. ಕಳೆದ ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್‌ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.