ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಒಳಮೀಸಲಾತಿಗೆ ಅಡ್ಡಿಪಡಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಒಳ ಮೀಸಲಾತಿ ಏಕಸದಸ್ಯ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ಗಳಲ್ಲಿ ಸಮೀಕ್ಷೆಗೆ ಹೋದವರಿಗೆ ಮಾಹಿತಿ ನೀಡಲು ನಿರಾಕರಿಸಿದರೆ ಅಥವಾ ಸಮೀಕ್ಷೆಗೆ ಅಡ್ಡಿಪಡಿಸಿದರೆ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಅಗತ್ಯ ಬಿದ್ದರೆ ಅಂತಹ ಅಪಾರ್ಟ್‌ಮೆಂಟ್‌ಗಳ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವನ್ನು ಕಡಿತಗೊಳಿಸಲೂ ಸೂಚಿಸಲಾಗಿದೆ. ಆದ್ದರಿಂದ ಎಲ್ಲ ನಾಗರಿಕರು ಸಮೀಕ್ಷೆಗೆ ಸಹಕಾರ ನೀಡಬೇಕು ಎಂದು ಒಳ ಮೀಸಲಾತಿ ಏಕಸದಸ್ಯ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ತಿಳಿಸಿದ್ದಾರೆ.