ನವದೆಹಲಿ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಉತ್ತರ ಪ್ರದೇಶದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ತಲೆಕೆಳಗಾಗಿ ನೇತುಹಾಕಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಉತ್ತರ ಪ್ರದೇಶದ ಬರೇಲಿಯಲ್ಲಿ ಈ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪತಿಯೊಬ್ಬ ತನ್ನ ಹೆಂಡತಿಯನ್ನು ಮನೆಯ ಟೆರೇಸ್‌ನಿಂದ ತಲೆಕೆಳಗಾಗಿ ನೇತುಹಾಕಿ ಐದು ನಿಮಿಷಗಳ ಕಾಲ ಹಾಗೆಯೇ ಬಿಟ್ಟಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಹಿಳೆಯ ಕಿರುಚಾಟ ಕೇಳಿ ನೆರೆಹೊರೆಯವರು ಧಾವಿಸಿ ಬಂದ ನಂತರ ಆಕೆಯನ್ನು ರಕ್ಷಿಸಲಾಗಿದೆ. ಈ ಸಂಬಂಧ ಪೊಲೀಸರು ಪತಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವೈರಲ್ ವಿಡಿಯೋದಲ್ಲಿ, ಮಹಿಳೆಯನ್ನು ಮನೆಯ ಮೇಲೆನಿಂದ ತಲೆಕೆಳಗಾಗಿ ನೇತುಹಾಕಲಾಗಿದ್ದು, ಆಕೆ ಸಹಾಯಕ್ಕಾಗಿ ಕಿರುಚಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ನೆರೆಹೊರೆಯವರು ಮಹಿಳೆಯನ್ನು ಕೆಳಗಿಳಿಸುತ್ತಿರುವುದು ಸಹ ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆ ಮೇ 13 ರಂದು ನಡೆದಿದೆ ಎಂದು ವರದಿಯಾಗಿದೆ.
WATCH VIDEO
Warning: Disturbing video, violence
UP woman tortured by husband held upside down from terrace
During a domestic dispute in UP's Bareilly, a man identified as Nitin Singh, while assaulting his wife, held her upside down from the terrace as the victim could be heard screaming… pic.twitter.com/ys546qkPm3
— Piyush Rai (@Benarasiyaa) May 16, 2025