ಕೊಪ್ಪಳ : ಕೊಪ್ಪಳ ತಾಲ್ಲೂಕಿನ ಹುಲಿಗಿ ಗ್ರಾಮದಲ್ಲಿ ಮೇ 20 ರಿಂದ 24 ರವರೆಗೆ ನಡೆಯಲಿರುವ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರೆಯಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ 1959 ಮತ್ತು ಕರ್ನಾಟಕ ಪ್ರಾಣಿ ಬಲಿ ನಿಷೇಧ ನಿಯಮಗಳು 1963 ರ ಪ್ರಕಾರ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದನ್ನು ನಿಷೇಧಿಸಿ ಕೊಪ್ಪಳ ತಹಶೀಲ್ದಾರರು ಹಾಗೂ ತಾಲ್ಲೂಕಾ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ವಿಠ್ಠಲ್ ಚೌಗಲಾ ಅವರು ಆದೇಶ ಹೊರಡಿಸಿದ್ದಾರೆ.
ಆದೇಶದನ್ವಯ ದೇವಸ್ಥಾನದ ಆವರಣದಲ್ಲಿ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ ಜಮೀನುಗಳಲ್ಲಿ ಭಕ್ತಾದಿಗಳು, ಸಾರ್ವಜನಿಕರು ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿ ಬಲಿ ನೀಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಆದೇಶವನ್ನು ಉಲ್ಲಂಘಿಸಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರರು ಹಾಗೂ ತಾಲ್ಲೂಕಾ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.