ಮುಂಬೈ : ಇತ್ತೀಚಿಗೆ ಬೆಂಗಳೂರಲ್ಲಿ ದುಬೈನಿಂದ 14 ಕೆಜಿಗು ಅಧಿಕವಾಗಿ ಅಕ್ರಮವಾಗಿ ಚಿನ್ನ ಸಾಗಿಸಿದ್ದ ಪ್ರಕರಣ ನಡೆದಿತ್ತು. ಈ ಸಂಬಂಧ ನಟಿ ರನ್ಯಾ ರಾವ್ ಸದ್ಯ ಬೆಂಗಳೂರಿನ ಪರಪ್ಪನ ಆಗ್ರಹಾರ ಜೈಲಲ್ಲಿ ಇದ್ದಾರೆ. ಇದೀಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಹೌದು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5. 75 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈನ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ಸಂಬಂಧ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. 5.10 ಕೋಟಿ ಮೌಲ್ಯದ ವಟ್ಟು 5.75 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳು ಇಬ್ಬರು ಮುಂಬೈ ಏರ್ಪೋರ್ಟ್ ನಲ್ಲಿಯೇ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಮ್ಮ ಬಟ್ಟೆ ಮತ್ತು ಜಾಕೆಟ್ ಜೇಬಿನಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿದ್ದರು. ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಗಿ ಬಿದ್ದಿದ್ದು, ಇಬ್ಬರನ್ನು ಇದೀಗ ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.