ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ನಿಯಂತ್ರಣ ಕಳೆದುಕೊಂಡ ಕಾರು ಬಾವಿಗೆ ಉರಳಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಕರ್ನಾಟಕದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಅಳಿಯ ಕುರುಪಲ್ಲಿ ಎಂಬ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಹೌದು ಆಂಧ್ರದಲ್ಲಿ ಕಾರು ಬಾವಿಗೆ ಉರುಳಿ ಬಿದ್ದು ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ತಾಲೂಕಿನ ಮುತ್ತಕದಲ್ಲಿ ಲೋಕೇಶ್, ಚಂದ್ರನಹಳ್ಳಿ ಗ್ರಾಮದ ನಿವಾಸಿ ಶಿವಾನಂದ ಮತ್ತು ಕೋಲಾರ ಜಿಲ್ಲೆಯ ಸುಗಟೂರಿನ ಚಲಪತಿ ಎನ್ನುವವರು ಸಾವನಪ್ಪಿದ್ದಾರೆ.
ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿರುವಗ ಈ ಒಂದು ಅಪಘಾತ ಸಂಭವಿಸಿದೆ. ಪೊಲೀಸ್ ವರದಿಗಳ ಪ್ರಕಾರ, ಅವರು ಮನೆಗೆ ಹಿಂತಿರುಗುತ್ತಿದ್ದಾಗ ಅವರ ವಾಹನವು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿತು. ಘಟನೆಯ ಸಮಯದಲ್ಲಿ, ಕಾರಿನಲ್ಲಿ ಐದು ಜನರಿದ್ದರು ಎನ್ನಲಾಗಿದ್ದು, ಆದಾಗ್ಯೂ, ಇಬ್ಬರು ಮಾತ್ರ ಬದುಕುಳಿದರು. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ.