ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತಿಕಾರವಾಗಿ ಈಗಾಗಲೇ ಭಾರತ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ದ್ವಂಸಗೊಳಿಸಿ 100ಕ್ಕೂ ಅಧಿಕ ಉಗ್ರರನ್ನು ಕೊಂದು ಸೇಡು ತೀರಿಸಿಕೊಂಡಿದೆ. ಆದರೆ ಈ ಒಂದು ಪಹಲ್ಗಾಮ್ ದಾಳಿಗೂ ಹಾಗೂ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನವಾಗಿರುವ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗು, ನಂಟು ಇದೆ ಎನ್ನುವುದು ಬಹಿರಂಗವಾಗಿದೆ.
ಹೌದು ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಜ್ಯೋತಿ ಮಲ್ಹೋತ್ರಾ ಪಾಕಿಸ್ತಾನದಲ್ಲಿ ಹೈ ಪ್ರೊಫೈಲ್ ಪಾರ್ಟಿಗಳಿಗೆ ಹಾಜರಾಗುತ್ತಿದ್ದಳು. ಗುಪ್ತಚರ ಸಂಸ್ಥೆಗಳಲ್ಲದೇ ಇತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗುತ್ತಿದ್ದಳು ಎಂದು ತಿಳಿದುಬಂದಿದೆ.
ಅಲ್ಲದೇ ಜ್ಯೋತಿ ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ ಕಾರಣಕ್ಕೆ ಆಕೆಗೆ ವಿಐಪಿ ಸುಲಭ್ಯ ದೊರೆಯುತ್ತಿತ್ತು.ಜ್ಯೋತಿ ಮಲ್ಹೋತ್ರಾ ಜನವರಿ 2025ರಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್ ಗೂ ಭೇಟಿ ನೀಡಿದ್ದಳು. ಪಹಲ್ಗಾಮ್ ಗೆ ಯಾವ ಮಾರ್ಗವಾಗಿ ಬರಬೇಕು? ಬಳಿಕ ಎಲ್ಲಿಗೆ ಭೇಟಿ ನೀಡಬೇಕು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಜ್ಯೋತಿ ತನ್ನ ಯೂಟ್ಯೂಬ್ ಚಾನಲ್ ನಲ್ಲಿ ವಿವರಿಸಿದ್ದಳು. ಹಾಗಾಗಿ ಇದೀಗ ಪಹಲ್ಗಾಮ್ ದಾಳಿಗೂ ಈಕೆಗೂ ನಂಟಿದೆ ಎನ್ನಲಾಗುತ್ತಿದೆ.