ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಸನ್ ರೈಸರ್ಸ್ ಹೈದರಾಬಾದ್ ಗೆ ಮಾಸ್ಟರ್ ಸ್ಟ್ರೋಕ್ ಎನ್ನುವಂತೆ ತಂಡದ ಸ್ಟಾರ್ ಪ್ಲೇಯರ್ ಟ್ರಾವಿಸ್ ಹೆಡ್ ಗೆ (Travis Head) ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಾಳೆ ನಡೆಯಲಿರುವಂತ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ.
ಕೋವಿಡ್ ( Covid-19 ) ಲಕ್ಷಣಗಳನ್ನು ಹೊಂದಿದ್ದಂತ ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಪ್ಲೇಯರ್ ಟ್ರಾವಿಸ್ ಹೆಡ್ ಅನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಬಂದಿದ್ದು, ಇದೀಗ ಟ್ರಾವಿಸ್ ಹೆಡ್ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಸದ್ಯ ಆಸ್ಟ್ರೇಲಿಯಾದಲ್ಲಿದ್ದು, ಸೋಮವಾರ ಬೆಳಗ್ಗೆ ಭಾರತಕ್ಕೆ ಆಗಮಿಸಲಿದ್ದು, ಅವರ ಆರೋಗ್ಯ ಸ್ಥಿತಿ ಪರಿಶೀಲಿಸಿ, ಉಳಿದ ಎರಡು ಪಂದ್ಯಗಳಿಗೆ ಲಭ್ಯವಾಗುವ ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ.
BREAKING: ಜಮ್ಮು-ಕಾಶ್ಮೀರದಲ್ಲಿ ಸೇನೆ, ಪೊಲೀಸರ ಭರ್ಜರಿ ಕಾರ್ಯಾಚರಣೆ: 42 ಜೀವಂತ ಬಾಂಬ್ ನಿಷ್ಕ್ರೀಯ