ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಏಕವನದಲ್ಲಿ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಕೇಂದ್ರ ಕಾರಾಗೃಹದ ವಾರ್ಡನ್ ಎಸ್.ಬಿ. ಪುನೀತ್ ನನ್ನು ಬಂಧಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏಕವಚನದಲ್ಲಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಕೇಂದ್ರ ಕಾರಾಗೃಹದ ವಾರ್ಡನ್ ಪುನೀತ್ ಎಂಬುವವರ ವಿರುದ್ಧ ಎಫ್ ಐಆರ್ ದಾಖಲಿಸಿ ಸರಸ್ವತಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಟಿ.ಕೆ ಬಡಾವಣೆಯ ಪವನ್ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.