ಬೆಂಗಳೂರು : ಬೆಂಗಳೂರಿನಲ್ಲಿ 132 ಮಿಲಿ ಮೀಟರ್ ನಷ್ಟು ಮಳೆಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ 132 ಮಿಲಿ ಮೀಟರ್ ನಷ್ಟು ಮಳೆಯಾಗಿದೆ, ಸಿದ್ದರಾಮಯ್ಯ ಕಾಲದಲ್ಲಿ ಸ್ವಲ್ಪ ಮಟ್ಟಿಗೆ ರಾಜಕಾಲುವೆ ಸರಿ ಮಾಡಿದ್ದೇವು. ಆದರೆ ನಂತರ ಸರ್ಕಾರ ಈ ಬಗ್ಗೆ ಏನೂ ಸರಿಮಾಡಿಲ್ಲ ಎಂದರು.
ಇನ್ನು ಬೆಂಗಳೂರಿನಲ್ಲಿ ಮಹಾ ಮಳೆಗೆ ಮೊದಲ ಬಲಿಯಾಗಿದ್ದು, ಮಳೆಯಿಂದ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಬಳಿ ನಡೆದಿದೆ.
ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಮನೆಯ ಗೋಡೆ ಕುಸಿದು ಶಶಿಕಲಾ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಕಂಪನಿಯ ಉದ್ಯೋಗಿಯಾಗಿರುವ ಶಶಿಕಲಾ ಮನೆಯಲ್ಲಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.