ಬೆಂಗಳೂರು : ಬೆಂಗಳೂರಿನಲ್ಲಿ ಈಗಾಗಲೇ ವರುಣ ಅಪರಿಸುತ್ತಿದ್ದು ಕೆಲವು ಪ್ರದೇಶಗಳಲ್ಲಿ ಅಂತೂ ಬಾರಿ ಮಳೆಯಿಂದಾಗಿ ರಸ್ತೆಗಳು ತುಂಬಿ ನದಿಯಂತೆ ಆಗಿವೆ. ಇನ್ನು ಕೆಲವು ನಗರಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ.ಅಲ್ಲದೆ ಇಂದು ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇಷ್ಟೆಲ್ಲಾ ಆದರೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಲ್ಲಿ ಮಳೆ ಹೆಚ್ಚಾಗಿದೆ ಅಷ್ಟೇ ಯಾವುದೇ ದೊಡ್ಡ ಸಮಸ್ಯೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿದೆ ಅಷ್ಟೇ ಆದರೆ ಯಾವುದೇ ದೊಡ್ಡ ಸಮಸ್ಯೆ ಇಲ್ಲ ಎಂದು ತಿಳಿಸಿದರು. ಮಳೆ ಬರಬೇಕು ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೇನೆ. ಮಳೆ ಬಂದರೆ ರೈತರಿಗೆ ಒಳ್ಳೆಯದಾಗುತ್ತದೆ. ಜಲಾಶಯಗಳು ತುಂಬುತ್ತವೆ. ಒಬ್ಬರು ಮೃತಪಟ್ಟಿರುವ ಮಾಹಿತಿ ಇದೆ ಆದರೆ ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದರು.
ಮಳೆ ಹಾನಿ ಪ್ರದೇಶದಲ್ಲಿ ನಮ್ಮ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿಗೆ ವಾಪಸ್ ಹೋಗುತ್ತಿದ್ದೇನೆ. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ಮಾಡಿ ಗೆಲುವು ಪ್ರದೇಶಗಳಿಗೆ ಭೇಟಿ ನೀಡುತ್ತೇವೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.