ಹಾವೇರಿ : ಡಿಸೆಂಬರ್ ವೇಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸಂಪುಟ ವಿಸ್ತರಣೆ ವಿಚಾರ ಕುರಿತಂತೆ ಈಗಾಗಲೇ ಶಾಸಕ ಕೆಎಂ ಶಿವಲಿಂಗೇಗೌಡ ನನಗೂ ಈ ಬಾರಿ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ನಾನು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಆದರೆ ನನ್ನನ್ನು ಪರಿಗಣಿಸಲಿ ಎಂದು ಉಪಸಭಾಪತಿ ರುದ್ರಪಲಮಾಣಿ ಹೇಳಿಕೆ ನೀಡಿದ್ದು, ನಮ್ಮ ಸಮುದಾಯದಿಂದ ನಾನೊಬ್ಬನೇ ಶಾಸಕನಿದ್ದೇನೆ. ಹೀಗಾಗಿ ಸಂಪುಟ ವಿಸ್ತರಣೆ ಆದರೆ ನನ್ನನ್ನು ಪರಿಗಣಿಸಲಿ. ಕಳೆದ ಬಾರಿಯೂ ನನಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇತ್ತು. ಆದರೆ ಸುರ್ಜೆವಾಲಾ ಅವರು ಡಿಪ್ಯೂಟಿ ಸ್ಪೀಕರ್ ಮಾಡಿದರು. ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಹಾವೇರಿಯಲ್ಲಿ ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿಕೆ ನೀಡಿದರು.