ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮಿನ ಮಳೆ ಶುರುವಾಗಿದ್ದು, ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಇದೀಗ ಬೆಂಗಳೂರಲ್ಲಿ ಕಳೆದ 24 ಗಂಟೆಗಳಲ್ಲಿ 103 ಮಿ.ಮೀ ದಾಖಲೆಯ ಮಳೆಯಾಗಿದೆ. ಮಳೆಯ ರೌದ್ರಾವತಾರದಿಂದ ಬರೊಬ್ಬರಿ 10 ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ನಡೆದಿದೆ.
ಹೌದು ಬೆಂಗಳೂರಿನಲ್ಲಿ ಧಾರಾಕಾರ ಮಳೆ ಆಗುತ್ತಿರುವ ಕುರಿತು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ, @karnataka portfolio ಎಂಬ ಖಾತೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದು ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿಯುತ್ತಿರುವುದು ಈ ವಿಡಿಯೋದಲ್ಲಿ ಸೆರೆಯಾಗಿದೆ.ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 103 ಮಿಮೀ ಮಳೆಯಾಗಿದೆ. ಮುಂಬರುವ ದಿನಗಳಲ್ಲಿ ನಗರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಬೆಂಗಳೂರಿನಲ್ಲಿ ಸುರಿದ ದಾಖಲೆಯ ಮಳೆಯಿಂದಾಗಿ ಬೆಂಗಳೂರಿನಲ್ಲಿ ಭಾರಿ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಗೆ ಕುಖ್ಯಾತಿ ಪಡೆದಿರುವ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ನಿನ್ನೆ ರಾತ್ರಿ ಮಳೆಯಿಂದಾಗಿ ಬರೊಬ್ಬರಿ 10ಕಿಮೀವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು ಎನ್ನಲಾಗಿದೆ. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗುತ್ತಿವೆ.
Heavy rainfall has begun in Shakarnagar, Hebbal, prompting the India IMD to issue a yellow alert for the area. The alert will remain in effect until May 23, indicating the possibility of continued moderate to heavy showers over the coming days. Residents are advised to stay… pic.twitter.com/wqeC8nhmKy
— Karnataka Portfolio (@karnatakaportf) May 19, 2025