ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇಂದೂ ಕೂಟ ಐಟಿ ಕಂಪನಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ನೆಚ್ಚರಿಕೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಉದ್ಯೋಗಿಗಳ ಹಿತದೃಷ್ಟಿಯಿಂದ ಮನೆಯಿಂದಲೇ ಕೆಲಸ ನಿರ್ವಹಿಸಲು ಕೆಲವು ಕಂಪನಿಗಳು ಸೂಚಿಸಿದೆ. ಸಾಧ್ಯವಾದರೆ ಆಫೀಸಿಗೆ ಬರಬಹುದು, ಇಲ್ಲವಾದಲ್ಲಿ ವರ್ಕ್ ಫ್ರಮ್ ಹೋಂ ಮಾಡುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಮಹಾಮಳೆಗೆ ಮೂವರು ಸಾವು
ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಹಾಮಳೆಗೆ ಮೂವರು ಬಲಿಯಾಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಮನೆಯ ಗೋಡೆ ಕುಸಿದು ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿ ಶಶಿಕಲಾ ಸಾವನ್ನಪ್ಪಿದ್ದಾರೆ.
ಮೋಟಾರ್ ನಿಂದ ಮಳೆ ನೀರು ತೆರವು ಮಾಡಲು ಹೋಗಿ ಕರೆಂಟ್ ಶಾಕ್ ನಿಂದ 12ರ ಬಾಲಕ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ.
ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ಮಹಾಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಅಪಾರ್ಟ್ ಮೆಂಟ್ ನ ಬೇಸ್ಮೆಂಟ್ ನಲ್ಲಿ ಮೋಟಾರ್ ನಿಂದ ಮಳೆಯ ನೀರು ಹೊರ ಹಾಕಲು ಹೋಗಿ ಕರೆಂಟ್ ಶಾಕ್ ನಿಂದ 12 ವರ್ಷದ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಮನಮೋಹನ್ ಕಾಮತ್(63) ಹಾಗೂ ದಿನೇಶ್ (12) ಎಂಬುದಾಗಿ ಗುರುತಿಸಲಾಗಿದೆ. ಇವರು ಬಿಟಿಎಂ ಲೇಔಟ್ ನ 2ನೇ ಹಂತದಲ್ಲಿರುವಂತ ಎನ್ ಎಸ್ ಪಾಳ್ಯದಲ್ಲಿನ ಮಧುವನ ಅಪಾರ್ಮೆಂಟ್ ನ ನಿವಾಸಿಗಳು. ಮೃತರ ಕುಟುಂಬಗಳಿಗೆ ಬಿಬಿಎಂಪಿಯಿಂದ ಮೃತರ ಕುಟುಂಬಕ್ಕೆ 5 ಲಕ್ಷರು. ಪರಿಹಾರಘೋಷಿಸಲಾಗಿದೆ.