ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮುಂದಿನ ಮೂರು ದಿನ ರಾಜ್ಯದ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬುಧವಾರವೂ ಭಾರೀ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿಸಲಾಗಿದೆ.