ವಿಕಾರಾಬಾದ್ : ತೆಲಂಗಾಣದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು, 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಕಾರಾಬಾದ್ ಜಿಲ್ಲೆಯ ಪರಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಮೆಂಟ್ ತುಂಬಿದ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿ, 17 ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ (ಪಿಎಂಇ) ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
Vikarabad, Telangana | Four dead, 17 injured following a collision between a cement-loaded truck and a bus under the Parigi police station limits in Vikarabad district. The bodies were shifted to the government hospital for post-mortem examination (PME), and the injured were…
— ANI (@ANI) May 20, 2025