ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಪೊಲೀಸರು ಬದಲಿ ಮಾರ್ಗ ಬಳಸುವಂತೆ ಮನವಿ ಮಾಡಿದ್ದಾರೆ.
ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವುದರಿಂದ ರೂಪೇನ ಅಗ್ರಹಾರದ ಬಳಿ ವಾಟರ್ ಲಾಗಿಂಗ್ ಆಗಿದ್ದು ಹೊಸೂರು ಮುಖ್ಯ ರಸ್ತೆ ಮೂಲಕ ನಗರದ ಒಳ ಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಆದ್ದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸುವುದು ಮತ್ತು ಸಹಕರಿಸುವುದು.
ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ಅಂಡರ್ ಪಾಸ್ ನಲ್ಲಿ ಮಳೆ ಬಂದಿದ್ದರಿಂದ ವಾಟರ್ ಲಾಗಿಂಗ್ ಆಗಿದ್ದು, ಹೊಸೂರು ಮುಖ್ಯರಸ್ತೆಯಲ್ಲಿ ನಗರದಿಂದ ಹೊರಭಾಗಕ್ಕೆ ಹೋಗುವ ಮತ್ತು ನಗರದ ಒಳಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದ್ದು ವಾಹನ ಸವಾರರು ಬದಲಿ ರಸ್ತೆ ಬಳಸುವುದು.
ಅಧಿಕ ಮಳೆ ಬಂದು ರಸ್ತೆಯಲ್ಲಿ ನೀರು ನಿಂತ ಸಂದರ್ಭಲ್ಲಿ ಅಗತ್ಯವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳು
1)ಹೊಸೂರು ಮುಖ್ಯರಸ್ತೆ:- ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರೂಪೇನ ಅಗ್ರಹಾರದ ಬಳಿ ಹೆಚ್ಚಿನ ಮಳೆ ಬಂದು ನೀರು ರಸ್ತೆಯಲ್ಲಿ ನಿಲ್ಲುವ ಸಂದರ್ಭದಲ್ಲಿ ಈ ಕೆಳಕಂಡ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿರುತ್ತದೆ.
ಹೆಚ್ಚಿನ ಮಳೆ ಬಂದು ರಸ್ತೆಯಲ್ಲಿ ನೀರು ನಿಂತ ತಕ್ಷಣ ಸಂಚಾರ ದಕ್ಷಿಣ ವಿಭಾಗದ ಕಂಟ್ರೋಲ್ ರೂಮ್‌ಗೆ ಮಾಹಿತಿ ನೀಡಿ, ಕಂಟ್ರೋಲ್ ರೂಮ್ ಮೂಲಕ ಬಿಬಿಎಂಪಿ ಘಟಕದ ಕಂಟ್ರೋಲ್ ರೂಮ್ ಗೆ ಮತ್ತು ಎನ್.ಹೆಚ್.ಎ.ಐ ಅಧಿಕಾರಿಗಳಿಗೆ ಮಾಹಿತಿ ನೀಡಿ ಸದರಿ ಅಧಿಕಾರಿಗಳನ್ನು ಕೂಡಲೇ ಸ್ಥಳಕ್ಕೆ ಬರುವಂತೆ ಮಾಡುವುದು.
Fire Force ಘಟಕಕ್ಕೆ ಮಾಹಿತಿ ನೀಡಿ ವಾಹನವನ್ನು ಸ್ಥಳಕ್ಕೆ ಬರಮಾಡಿಕೊಂಡು ನೀರನ್ನು ರಸ್ತೆಯಿಂದ ಹೊರ ಹಾಕಿಸುವುದು.
ರೂಪೇನ ಅಗ್ರಹಾರದಲ್ಲಿ ನೀರು ನಿಂತ ತಕ್ಷಣ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಕರೆ ಮಾಡಿ ಎಲೆಕ್ಟ್ರಾನಿಟಿ ಕಡೆಯಿಂದ ಫೈ ಓವರ್ ಮೇಲ್ಬಾಗ ಯಾವುದೇ ವಾಹನಗಳ ಸಂಚಾರವನ್ನು ನಿರ್ಬಂಧಿಸಿ, ಸದರಿ ವಾಹನಗಳನ್ನು ನೈಸ್ ರಸ್ತೆ ಮೂಲಕ ಬನ್ನೇರುಘಟ್ಟ ರಸ್ತೆಗೆ ತಲುಪಿ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡುವುದು.
ಎಲೆಕ್ಟ್ರಾನಿಕ್ ಸಿಟಿ ಕಡೆಯಿಂದ ಹೊಸೂರು ಮುಖ್ಯರಸ್ತೆಯಲ್ಲಿ ಫೈ ಓವರ್ ಕೆಳಭಾಗದಲ್ಲಿ ಬರುವಂತಹ ವಾಹನಗಳನ್ನು ಹೊಸರೋಡ್ ಜಂಕ್ಷನ್‌ನಲ್ಲಿ ಬಲ ತಿರುವು ಮಾಡಿಸಿ ನಾಗನಾಥಪುರ ಮೂಲಕ ಸರ್ಜಾಪುರ ಮುಖ್ಯರಸ್ತೆಗೆ ಕಳುಹಿಸಿ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡುವುದು ಅಥವಾ ಎಡ ತಿರುವು ಮಾಡಿಸಿ ಬೇಗೂರು ಕೆರೆ ರಸ್ತೆ ಮೂಲಕ ಅಕ್ಷಯನಗರ, ವಿಜಯ ಬ್ಯಾಂಕ್ ಕಾಲೋನಿ ರಸ್ತೆ ಮೂಲಕ ಬನ್ನೇರುಘಟ್ಟ ಮುಖ್ಯರಸ್ತೆ ಬಂದು ನಗರ ಪ್ರವೇಶಿಸಲು ಅನುವು ಮಾಡಿಕೊಡುವುದು.
2)ಹೊರವರ್ತುಲ ರಸ್ತೆ
ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊರವರ್ತುಲ ರಸ್ತೆ ಸಿಲ್ಕ್ಬೋರ್ಡ್ ಜಂಕ್ಷನ್ ಬಳಿ ಹೆಚ್ಚಿನ ಮಳೆ ಬಂದು ನೀರು ನಿಲ್ಲುವ ಸಂದರ್ಭದಲ್ಲಿ ಈ ಕೆಳಕಂಡ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿರುತ್ತದೆ.
ಬನಶಂಕರಿ ಕಡೆಯಿಂದ ಬರುವ ವಾಹನಗಳನ್ನು ಈಸ್ಟ್ ಎಂಡ್ ಸರ್ಕಲ್ ಬಳಿ ಎಡ ತಿರುವು ಮಾಡಿಸಿ. ಸಾಗರ್ ಜಂಕ್ಷನ್ ಗೆ ಬಂದು ಬಲ ತಿರುವು ಮಾಡಿಸಿ ಬನ್ನೇರಘಟ್ಟ ರಸ್ತೆ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡುವುದು.
ಇನ್ನೂ ಮುಂದೆ ಬಂದ ವಾಹನಗಳನ್ನು ಜಯದೇವ ಜಂಕ್ಷನ್‌ನಲ್ಲಿ ಎಡ ತಿರುವು ಮಾಡಿಸಿ ಬನ್ನೇರುಘಟ್ಟ ಮುಖ್ಯರಸ್ತೆ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡುವುದು.
ಬಿ.ಟಿ.ಎಂ ಲೇಔಟ್ ಒಳಭಾಗದಿಂದ ಬರುವ ವಾಹನಗಳನ್ನು 16ನೇ ಮುಖ್ಯರಸ್ತೆಯಲ್ಲಿ ಎಡ ತಿರುವು ಮಾಡಿಸಿ ತಾವರೆಕೆರೆ ಮುಖ್ಯರಸ್ತೆ ಮೂಲಕ ಡಾ||ಮರಿಗೌಡ ರಸ್ತೆ, ಡೈರಿ ಸರ್ಕಲ್ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡುವುದು.
ಹೊರವರ್ತುಲ ರಸ್ತೆ ಹೆಚ್.ಎಸ್.ಆರ್ ಕಡೆಯಿಂದ ಸಿಲ್ಕ್ಬೋರ್ಡ್ ಜಂಕ್ಷನ್‌ಗೆ ಬರುವ ವಾಹನಗಳನ್ನು 27ನೇ ಮೈನ್ ಜಂಕ್ಷನ್‌ನಲ್ಲಿ ಎಡ ತಿರುವು ಮಾಡಿಸಿ ಸೋಮಸುಂದರಪಾಳ್ಯ, ಮಂಗಮ್ಮನಪಾಳ್ಯ ಮೂಲಕ ಹೊಸೂರು ಮುಖ್ಯರಸ್ತೆಗೆ ಕಳುಹಿಸುವುದು ಹಾಗೆಯೇ ನಗರ ಪ್ರವೇಶಿಸುವ ವಾಹನಗಳನ್ನು ಬಲ ತಿರುವು ಮಾಡಿಸಿ ಆಟೋ ಮಾರ್ಟ್ ಜಂಕ್ಷನ್ ಸರ್ಜಾಪುರ ಮುಖ್ಯರಸ್ತೆ ಮೂಲಕ ಮಡಿವಾಳ ಚೆಕ್‌ಪೋಸ್ಟ್ ಜಂಕ್ಷನ್ ಗೆ ಬಂದು ನಗರ ಪ್ರವೇಶಿಸಲು ಅನುವು ಮಾಡಿಕೊಡುವುದು.
ಸಂಚಾರ ಸಲಹೆ
ಹೊಸೂರು ಮುಖ್ಯರಸ್ತೆ ಮತ್ತು ಹೊರ ವರ್ತುಲ ರಸ್ತೆಯಲ್ಲಿ ವಾಟರ್ ಲಾಗಿಂಗ್ ಆಗಿದ್ದು ಸುಗಮ ಸಂಚಾರಕ್ಕೆ ಅಡಚಣೆಯಾಗಿರುವುದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸುವುದು ಮತ್ತು ಸಹಕರಿಸುವುದು pic.twitter.com/TiO8hkaOfH
— MADIVALA TRAFFIC BTP (@madivalatrfps) May 20, 2025
ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವುದರಿಂದ ರೂಪೇನ ಅಗ್ರಹಾರದ ಬಳಿ ವಾಟರ್ ಲಾಗಿಂಗ್ ಆಗಿದ್ದು ಹೊಸೂರು ಮುಖ್ಯ ರಸ್ತೆ ಮೂಲಕ ನಗರದ ಒಳ ಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಆದ್ದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸುವುದು ಮತ್ತು ಸಹಕರಿಸುವುದು. pic.twitter.com/En0XCy58y1
— MADIVALA TRAFFIC BTP (@madivalatrfps) May 20, 2025
ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ಅಂಡರ್ ಪಾಸ್ ನಲ್ಲಿ ಮಳೆ ಬಂದಿದ್ದರಿಂದ ವಾಟರ್ ಲಾಗಿಂಗ್ ಆಗಿದ್ದು, ಹೊಸೂರು ಮುಖ್ಯರಸ್ತೆಯಲ್ಲಿ ನಗರದಿಂದ ಹೊರಭಾಗಕ್ಕೆ ಹೋಗುವ ಮತ್ತು ನಗರದ ಒಳಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದ್ದು ವಾಹನ ಸವಾರರು ಬದಲಿ ರಸ್ತೆ ಬಳಸುವುದು. pic.twitter.com/JK6szRokI2
— MADIVALA TRAFFIC BTP (@madivalatrfps) May 20, 2025