ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಕೇಜಿ ಹಳ್ಳಿ ಸಬ್ ಇನ್ಸ್ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇಜಿಹಳ್ಳಿ ಸಬ್ ಇನ್ಸ್ಪೆಕ್ಟರ್ ನಾಗರಾಜ್ ಪತ್ನಿ ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ಮನೆಯಲ್ಲಿ ನಾಗರಾಜ್ ಪತ್ನಿ ಶಾಲಿನಿ ಅವರು ನೇಣಿಗೆ ಶರಣಾಗಿದ್ದಾರೆ. ನಾಗರಾಜ್ ಅವರನ್ನು ಶಾಲಿನಿ ಎರಡನೇ ಮದುವೆಯಾಗಿದ್ದರು. ಘಟನೆ ಕುರಿತು ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಶಾಲಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.