ಬೆಂಗಳೂರು: ಮೇ.25ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಬೆಂಗಳೂರಿನ ವಿವಿಧ ಕೇಂದ್ರಗಳಲ್ಲಿ ನಡೆಸಲು ನಿಗದಿ ಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ.
ಈ ಸಂಬಂಧ ಆದೇಶ ಹೊರಡಿಸಿರುವಂತ ಅವರು ದಿನಾಂಕ 25-05-2025ರಂದು ಕೇಂದ್ರ ಲೋಕಸೇವಾ ಆಯೋಗದ ಸಿವಿಲ್ ಸರ್ವಿಸ್ ಪ್ರಿಲಿಮಿನರಿ ಪರೀಕ್ಷೆ-2025 ನಗರದ 86 ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಯು ಸುಗಮವಾಗಿ, ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ ಎಂದಿದ್ದಾರೆ.
ಮೇ.25ರಂದು ಯುಪಿಎಸ್ಸಿ ಪ್ರಿಲಿಮಿನರಿ ಪರೀಕ್ಷೆ ನಡೆಯುವ ಕಾರಣ, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು, ಸೈಬರ್, ಕಂಪ್ಯೂಟರ್ ಸೆಂಟರ್ ಗಳನ್ನು ಮುಚ್ಚುವಂತೆ ಖಡಕ್ ಆದೇಶ ಮಾಡಿದ್ದಾರೆ.
ಶಿವಮೊಗ್ಗ: ಮೇ.22ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
GOOD NEWS: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ