ಧಾರವಾಡ : ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಬೆಂಗಳೂರು ಮಹಾನಗರ ಸೇರದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಧಾರವಾಡದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ್ದಾನೆ. ಹಿರೇ ಹರಕುಣಿ ಗ್ರಾಮದ ಮೈಲಾರಪ್ಪ ಕೊಣಕಲ್ (20) ಮೃತ ಯುವಕ ಎಂದು ತಿಳಿದುಬಂದಿದೆ. ಜಾನುವಾರು ಮೈ ತೊಳೆಯಲು ತೆರಳಿದ್ದಾಗ ಸಿಡಿಲು ಬಡಿದಿದೆ. ಈ ವೇಳೆ ಮೈಲಾರಪ್ಪ ಸ್ಥಳದಲ್ಲಿ ಸಾವಣಪ್ಪಿದ್ದಾನೆ.ಘಟನೆ ಕುರಿತಂತೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.