ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ಶಾಕ್ ಎದುರಾಗಿದ್ದು, ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೆಎಸ್ ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಕ್ಷಮ ಪ್ರಾಧಿಕಾರದಿಂದ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಹೌದು ಮುನಿರತ್ನ ವಿರುದ್ಧ ತನಿಖೆಗೆ ಇದೀಗ ಗ್ರೀನ್ ಸಿಗ್ನಲ್ ದೊರಕಿದೆ. ಮುನಿರತ್ನ ವಿರುದ್ಧದ ತನಿಖೆಗೆ ಪ್ರಾಧಿಕಾರ ಅನುಮತಿ ನೀಡಿದೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿದೆ. 36 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 20 ಲಕ್ಷ ಲಂಚ ಸ್ವೀಕಾರ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1998ರ ಅಡಿ ಪ್ರಕರಣ ದಾಖಲಾಗಿತ್ತು.
ಪ್ರಾಥಮಿಕ ಹಂತದ ತನಿಖೆಯಲ್ಲಿ ಆರೋಪ ಸಹ ಸಾಬೀತು ಆಗಿತ್ತು. ಮುನಿರತ್ನ ಅಪರಾಧ ಎಸಗಿರುವುದು ಸಾಬೀತಾಗಿತ್ತು. ಸಿಐಡಿ ಡಿಜಿಪಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿದ್ದರು. ಸಿಐಡಿ ಪೊಲೀಸ್ ಮಹಾನಿರ್ದೇಶಕರ ಕೋರಿಕೆಯ ಮೇರೆಗೆ ಇದೀಗ ತನಿಖೆಗೆ ಅನುಮತಿ ನೀಡಲಾಗಿದೆ.