ಬೆಂಗಳೂರು : ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಮಳೆ ಆರಂಭವಾಗುತ್ತದೆ. ಆದರೆ ಇದೀಗ ಮೇ 24ರವರೆಗೆ ಕೇರಳ ಕರ್ನಾಟಕ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡದೆ.
ಹೌದು ಮುಂಚಿತವಾಗಿ ಮೇ 24ರವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಪುದುಚೇರಿ, ಕಾರೈಕಲ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ನೈಋತ್ಯ ಮಾನ್ಸೂನ್ (Monsoon 2025) ಮುಂದಿನ 4ರಿಂದ 5 ದಿನಗಳಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪ್ರತಿ ವರ್ಷ ಜೂನ್ ತಿಂಗಳ ಆರಂಭದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತಿತ್ತು. ಆದರೆ, ಅದಕ್ಕೂ 2-3 ದಿನಗಳು ಮುಂಚಿತವಾಗಿಯೇ ಮಾನ್ಸೂನ್ ಆಗಮನವಾಗುವ ಸಾಧ್ಯತೆಯಿದೆ. ಮುಂಚಿತವಾಗಿ ಮಳೆಯಾಗುವುದರಿಂದ ಬಿಸಿಲಿನ ಬೇಗೆ ಕಡಿಮೆಯಾಗಲಿದೆ.