ಬೆಂಗಳೂರು : ವಿದ್ಯಾವಿಕಾಸ ಯೋಜನೆಯಡಿ 2025-56ನೇ ಸಾಲಿಗೆ ಎಲ್ಲಾ ವಿಭಾಗದ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆ ಸರಬರಾಜು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
2025-26ನೇ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಲ್ಲೇಖ (1)ರಲ್ಲಿ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಪಡೆದು, ಕೆಳಕಂಡ ಸಂಸ್ಥೆಗಳ ಮೂಲಕ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆಗಳ ಸರಬರಾಜು ಕಾರ್ಯಕ್ರಮವನ್ನು ಕೈಗೊಳ್ಳಲಾಗಿರುತ್ತದೆ.
ಸಂಸ್ಥೆ ಸರಬರಾಜು ಮಾಡುವ ಜಿಲ್ಲೆಗಳು
ಬೆಂಗಳೂರು ವಿಭಾಗದ ಎಲ್ಲಾ 11 ಮತ್ತು ಮೈಸೂರು ವಿಭಾಗದ ಎಲ್ಲಾ 8 ಜಿಲ್ಲೆಗಳ 1 ರಿಂದ 7ನೇ ತರಗತಿಯ ಗಂಡು ಹಾಗೂ 1 ರಿಂದ 5ನೇ ತರಗತಿಯ ಹೆಣ್ಣು ಮಕ್ಕಳಿಗೆ ಒಂದು ಜೊತೆ
ಕಲಬುರಗಿ ವಿಭಾಗದ ಎರಡು ಜಿಲ್ಲೆಗಳಾದ ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಎರಡು ಜೊತೆ.
ಬೆಳಗಾವಿ ವಿಭಾಗದ 3 ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ ಹಾಗೂ ಚಿಕ್ಕೋಡಿ ಜಿಲ್ಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಎರಡು ಜೊತೆ.
ಬೆಂಗಳೂರು ವಿಭಾಗದ ಎಂಟು ಜಿಲ್ಲೆಗಳಾದ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಧುಗಿರಿ ಜಿಲ್ಲೆಗಳ 1 ರಿಂದ 7ನೇ ತರಗತಿಯ ಗಂಡು ಹಾಗೂ 1 ರಿಂದ 5ನೇ ತರಗತಿಯ ಹೆಣ್ಣು ಮಕ್ಕಳಿಗೆ ಒಂದು ಜೊತೆ ಹಾಗೂ ಸದರಿ ಜಿಲ್ಲೆಗಳ 8 ರಿಂದ 10 ನೇ ತರಗತಿಯ ಗಂಡು ಹಾಗೂ 6 ರಿಂದ 10ನೇ ತರಗತಿಯ ಹೆಣ್ಣು ಮಕ್ಕಳಿಗೆ 2ಜೊತೆ ಉಚಿತ ಸಮವಸ್ತ್ರ ಸರಬರಾಜು.