ಬೆಂಗಳೂರು : ವಿಶ್ವವಿದ್ಯಾಲಯಗಳಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಪೀಠದ ಮೂಲಕ ಸಂವಿಧಾನದ ಬಗ್ಗೆ ಜಾಗೃತಿಯನ್ನು ಮೂಡಿಸುವ ಕುರಿತು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿ ವರ್ಷ 26 ನವೆಂಬರ್ ನ್ನು ಸಂವಿಧಾನ ದಿನವನ್ನಾಗಿ ಆಚರಣೆ ಮಾಡುತ್ತಿದ್ದು, ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ವಾಚಿಸುವ ಬಗ್ಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿರುತ್ತದೆ. ವಿಶ್ವವಿದ್ಯಾಲಯಗಳಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ/ ಡಾ.ಬಿ.ಆರ್. ಅಂಬೇಡ್ಕರ್ ಪೀಠಗಳು ವಿಶ್ವವಿದ್ಯಾಲಯ ಮಟ್ಟದಲ್ಲಿ ಕಾಲೇಜುಗಳ ಹಂತದಲ್ಲಿ ಮತ್ತು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿನ ವಿದ್ಯಾರ್ಥಿನಿಲಯಗಳಲ್ಲಿ ಸಂವಿಧಾನದ ಬಗ್ಗೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ರವರ ಸಿದ್ಧಾಂತಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸುವುದು ಸೂಕ್ತವಾಗಿದು, ಈ ಹಿನ್ನಲೆಯಲ್ಲಿ ಈ ಕೆಳಕಂಡ ಕಾರ್ಯಕ್ರಮಗಳನ್ನು ಸರ್ಕಾರಿ, ಖಾಸಗಿ ಮತ್ತು ಅನುದಾನರಹಿತ ಪದವಿ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್/ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಪ್ರಾಂಶುಪಾಲರಿಗೆ ಸೂಚಿಸಲಾಗಿರುತ್ತದೆ.
ಡಾ. ಬಿ.ಆರ್. ಅಂಬೇಡ್ಕರ್ ರವರ ಸಿದ್ಧಾಂತಗಳು ಮತ್ತು ಸಂವಿಧಾನದ ಆಶಯಗಳ ಬಗ್ಗೆ ಉಪನ್ಯಾಸ/ ಕಾರ್ಯಾಗಾರಗಳನ್ನು ಆಯೋಜಿಸುವುದು.
ವಿದ್ಯಾರ್ಥಿಗಳಿಗೆ ಈ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಲು ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಆಶು ಭಾಷಣ ಚರ್ಚಾ ಸ್ಪರ್ಧೆ ಇತ್ಯಾದಿಗಳನ್ನು ಆಯೋಜಿಸುವುದು.
ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನಗಾಥೆಯ ಬಗ್ಗೆ Documentary ಗಳ ಪರದರ್ಶನ.
ಕನ್ನಡ & ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ “ಡಾ. ಬಿ.ಆರ್. ಅಂಬೇಡ್ಕರ್ ಓದು” ಕಾರ್ಯಕ್ರಮದ ಆಯೋಜನೆ.
ಸಂವಿಧಾನ ರಚನಾ ಸಮಿತಿಯ ಸಭೆಯಲ್ಲಿ ನಡೆದಿರುವ ಚರ್ಚೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸುವುದು.