ಬೆಂಗಳೂರು : ರಾಜ್ಯದಲ್ಲಿ ಮೇ ತಿಂಗಳಲ್ಲಿ 33 ಕೊರೋನಾ ಸೋಂಕು ಪ್ರಕರಣ ದೃಢಪಟ್ಟಿದ್ದು, ಪ್ರಸ್ತುತ 16 ಸಕ್ರಿಯ ಕೊರೋನಾ ಸೋಂಕು ಪ್ರಕರಣ ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಸದ್ಯ 16 ಸಕ್ರಿಯ ಕೊರೊನಾ ಪ್ರಕರನಗಳು ಪತ್ತೆಯಾಗಿದ್ದು, ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ ರಾಜ್ಯದಲ್ಲಿ ಸಕ್ರಿಯವಾಗಿರುವ 16 ಪ್ರಕರಣಗಳಲ್ಲೂ ಎಲ್ಲರೂ ಮನೆಯಲ್ಲೇ ಸ್ವಯಂ ನಿಗಾದಲ್ಲಿ ಇದ್ದಾರೆ. ಯಾರಿಗೂ ತೀವ್ರ ರೋಗ ಲಕ್ಷಣಗಳು ಇಲ್ಲ. ಯಾರೊಬ್ಬರೂ ಆಸ್ಪತ್ರೆಗೆ ದಾಖಲಾಗಿಲ್ಲ. ಹೀಗಾಗಿ ಅನಗತ್ಯ ಆತಂಕ ಬೇಡ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ 16 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಬೇರೆ ಬೇರೆ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದರೆ ನಮ್ಮಲ್ಲಿ ಅಂತಹ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ಅನಗತ್ಯವಾಗಿ ಆತಂಕಪಡುವುದು ಬೇಡ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.