ಕೋಲಾರ : ಪತ್ನಿಯ ಜೊತೆ ಅಕ್ರಮ ಸಂಬಂಧ ಹಿನ್ನೆಲೆ, ಪತಿಯೊಬ್ಬ ತನ್ನ ಸಹಚರರ ಜೊತೆಗೂಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದ ಪ್ರಶಾಂತನಗರದಲ್ಲಿ ಈ ಒಂದು ಕೊಲೆ ಘಟನೆ ನಡೆದಿದೆ. ಇರ್ಫಾನ್ ಹಾಗೂ ಆತನ ಸಹಚರರಿಂದ ಅಮೀನ್ (30) ಎನ್ನುವ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಕೊಲೆಯಾದ ಅಮೀನ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದವನು ಎಂದು ತಿಳಿದುಬಂದಿದೆ. ಇರ್ಫಾನ್ ಪತ್ನಿ ಹುಸ್ನಾ ಜೊತೆಗೆ ಅಮಿನ್ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗುತ್ತಿದೆ. ಈ ವಿಚಾರವಾಗಿ ಹುಸ್ನಾ ಅಕ್ಕ ರಾಜಿ ಪಂಚಾಯಿತಿಯ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.
ಈ ವೇಳೆ ಮಚ್ಚಿನಿಂದ ಕೊಚ್ಚಿ ಇರ್ಫಾನ್ ಮತ್ತು ಸಹಚರರು ಅಮೀನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಘಟನೆಯ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.