ಶಿವಮೊಗ್ಗ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಖಾಸಗಿ ಬಸ್ ಒಂದು ಬೈಕ್ ಗೆ ಹಿಂಬದಿಯಾಗಿ ಡಿಕ್ಕಿಯಾದ ಪರಿಣಾಮ ತಾಯಿ-ಮಗು ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದಂತ ಗಜಾನನ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದೆ. ತುಪ್ಪುರು ಬಳಿಯಲ್ಲಿ ನಡೆದಂತ ಅಪಘಾತದಲ್ಲಿ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದರೇ, ಹಿಂಬದಿಯಲ್ಲಿ ಕುಳಿತಿದ್ದಂತ ಓರ್ವ ಮಹಿಳೆ, ಮತ್ತೊಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನೂ ಮತ್ತೊಂದು ಮಗುವಿಗೆ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಇಂದು ಸಂಜೆ 4.35ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ