ಬೆಂಗಳೂರು : ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಶ್ವಾನಕ್ಕೆ ಹೋಲಿಸಿದ್ದರು. ಇದರಿಂದ ಆಕ್ರೋಶಗೊಂಡ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚಿತ್ತಾಪೂರ ಪಟ್ಟಣದ ಪ್ರವಾಸಿ ಮಂದಿರದ ಎದರುಗಡೆ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್ ಹಾಕಿದ್ದರು. ಈ ವಿಚಾರವಾಗಿ ಚಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.
ಹೌದು ಇತ್ತೀಚಿಗೆ ಚಿತಾಪುರಕ್ಕೆ ಭೇಟಿ ನೀಡಿದಾಗ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ್ದಾರೆ. ಇದರಿಂದ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಕೆರಳಿದ್ದು, ಚಿತ್ತಾಪೂರ ಪಟ್ಟಣದ ಪ್ರವಾಸಿ ಮಂದಿರದ ಎದರುಗಡೆ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್ ಹಾಕಿದ್ದರು.ಅಲ್ಲದೇ ಅವರ ಕಾರಿನ ಮೇಲೆ ಬಣ್ಣ ಎರಚಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಚಲವಾದಿ ನಾರಾಯಣಸ್ವಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ದೂರು ನೀಡಿದ್ದಾರೆ.
ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಾಜಕ್ಕೆ ಮನವಿ
ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಸಿದಕ್ಕೆ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚಿತ್ತಾಪೂರ ಪಟ್ಟಣದ ಪ್ರವಾಸಿ ಮಂದಿರದ ಎದರುಗಡೆ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್ ಹಾಕಿದ್ದರು. ಬಿಜೆಪಿ ನಾಯಕರು ಖಂಡಿಸಿದ್ದು, ಇಂದು (ಮೇ 22) ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು. ತಕ್ಷಣ ಘಟನೆ ಸಂಬಂಧ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು. ಅಲ್ಲದೇ ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ಅವರನ್ನು ವಜಾ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಬಿಜೆಪಿ ನಿಯೋಗ, ಘಟನೆ ಸಂಬಂಧ ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆಯನ್ನು ವಜಾ ಮಾಡಬೇಕು. ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಮನವಿ ಪತ್ರ ನೀಡಿದರು. ಈ ವೇಳೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಚಲುವಾದಿ ನಾರಾಯಣಸ್ವಾಮಿ, ರವಿಕುಮಾರ್, ಅಶ್ವತ್ಥ್ ನಾರಾಯಣ ಸೇರಿದಂತೆ ಇತರರು ಇದ್ದರು.
ಇನ್ನು ಇದೆ ವಿಚಾರವಾಗಿ ಘಟನೆಯನ್ನು ಖಂಡಿಸಿ ಮೇ 24 ರಂದು ಕಲಬುರ್ಗಿ ಚಲೋ ಹಮ್ಮಿಕೊಂಡಿದ್ದೇವೆ ಎಂದು ಕಲ್ಬುರ್ಗಿಯಲ್ಲಿ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಕಲಬುರ್ಗಿ ಜಿಲ್ಲೆಯಲ್ಲಿ ಕಾನೂನು ಮತ್ತು ಸೌಬ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಪೊಲೀಸರ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ.