ಬೆಂಗಳೂರು: ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದ 1 ಫರ್ನೆಸ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ಬಿಬಿಎಂಪಿ ತಿಳಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಹೊಸದಾಗಿ ಚಿಮಣಿ ಹಾಗೂ ಇತರೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಮುಂದುವರಿದು, 2 ಫರ್ನೆಸ್ ಗಳ ಪೈಕಿ 1 ಫರ್ನೆಸ್ ಅನ್ನು ದಿನಾಂಕ: 26-05-2025 ರಿಂದ 02-09-2025 ರವರೆಗೆ ಸುಮಾರು 3 ತಿಂಗಳುಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, 1 ಫರ್ನೆಸ್ ಮಾತ್ರ ಕಾರ್ಯನಿರ್ವಹಿಸಲಿದೆ. ಈ ಸಂಬಂಧ ಸಾರ್ವಜನಿಕರು ಸಹಕರಿಸಬೇಕೆಂದು ದಕ್ಷಿಣ ವಲಯ ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿರುತ್ತಾರೆ.
GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ