ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಆಂತರಿಕ ದೂರು ನಿರ್ವಹಣಾ ಸಮಿತಿ ಪುನರ್ ರಚಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲೆ ಓದಲಾದ ಕ್ರಮ ಸಂಖ್ಯೆ(1)ರಂತೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) 2013(Sexual Harassment of Women at work place (Prevention Probhibition and Redressal)ನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿರುತ್ತದೆ. ಈ ಅಧಿನಿಯಮದನ್ವಯ 10 ಅಥವಾ 10 ಕ್ಕಿಂತ ಹೆಚ್ಚು ಮಹಿಳೆಯರು ಕಾರ್ಯ ನಿರ್ವಹಿಸುತ್ತಿರುವ ಯಾವುದೇ ಖಾಸಗಿ, ಸರ್ಕಾರಿ, ನಿಗಮ, ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿರುತ್ತದೆ. ಅದರಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ / ಸಿಬ್ಬಂದಿಗಳಿಗೆ ಹಲವಾರು ಸಂದರ್ಭಗಳಲ್ಲಿ ವಿನಾಕಾರಣ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಅವರ ಮೇಲೆ ನಡೆಯುವ ಲೈಂಗಿಕ ಕಿರುಕುಳಗಳಿಗೆ ಸಂಬಂಧಪಟ್ಟ ದೂರುಗಳನ್ನು ಮೇಲ್ವಿಚಾರಣೆ ಮಾಡಿ ಪರಿಣಾಮಕಾರಿಯಾಗಿ ಸಮರ್ಪಕವಾಗಿ ತ್ವರಿತಗತಿಯಲ್ಲಿ ಪರಿಹರಿಸಲು ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ರಚಿಸಬೇಕಾಗಿರುತ್ತದೆ.
ಮೇಲೆ ಓದಲಾದ ಕ್ರಮ ಸಂಖ್ಯೆ(2)ರ ಆದೇಶದಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ರಚಿಸಲಾದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿನ ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ಈ ಕೆಳಕಂಡಂತೆ ಪುನರ್ ರಚಿಸಲು ತೀರ್ಮಾನಿಸಿ ಆದೇಶಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ / ಸಿಬ್ಬಂದಿಗಳ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸ್ವೀಕೃತವಾಗುವ ದೂರುಗಳನ್ನು ಮೇಲ್ವಿಚಾರಣೆ ಮಾಡಿ, ಪರಿಣಾಮಕಾರಿಯಾಗಿ, ಸಮರ್ಪಕವಾಗಿ, ತ್ವರಿತಗತಿಯಲ್ಲಿ ಪರಿಹರಿಸಲು, ಮಹಿಳೆಯರ ಹಕ್ಕುಗಳ ಬಗ್ಗೆ ಅರಿವನ್ನು ಉಂಟು ಮಾಡಲು ಈ ಕೆಳಕಂಡ ಅಧಿಕಾರಿಗಳನ್ನೊಳಗೊಂಡ ಇಲಾಖೆಯ