ಬೆಂಗಳೂರು : ವಿಶ್ವದಾದ್ಯಂತ ಮಹಾಮಾರಿ ಕೊರೊನಾ ಸೋಂಕು ಮತ್ತೆ ಎಂಟ್ರಿ ಕೊಟ್ಟಿದ್ದು, ಕರ್ನಾಟಕದಲ್ಲಿ ಮೇ ತಿಂಗಳಿನಲ್ಲಿ ಒಟ್ಟು 33 ಪ್ರಕರಣಗಳು ದಾಖಲಾಗಿದೆ.
ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ಧೃಡವಾಗಿದ್ದು, ವಾಣು ವಿಲಾಸ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಸದ್ಯ 16 ಸಕ್ರಿಯ ಪ್ರಕರಣಗಳಿದೆ. ರಾಜ್ಯದಲ್ಲಿ ಒಟ್ಟು 33 ಪ್ರಕರಣಗಳು ದಾಖಲಾಗಿದೆ.
ಜಗತ್ತಿನಾದ್ಯಂತ ಭೀತಿ ಹುಟ್ಟಿಸಿದ್ದ ಕೊರೊನಾ ವೈರಸ್ ಮತ್ತೆ ಎಂಟ್ರಿ ಕೊಟ್ಟಿದ್ದು, ಹಾಂಗ್ ಕಾಂಗ್, ಸಿಂಗಾಪುರ, ಚೀನಾ ಮತ್ತು ಥೈಲ್ಯಾಂಡ್‌ನಂತಹ ದೇಶಗಳಲ್ಲಿ ಹೊಸ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಭಾರತದಲ್ಲೂ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿದ್ದು, ಭಾರತದಲ್ಲಿ ಸಕ್ರಿಯ ಕೋವಿಡ್ ಕೇಸ್ ಗಳ ಸಂಖ್ಯೆ 257 ಆಗಿದೆ.