ಉತ್ತರಕನ್ನಡ : ರಾಜ್ಯದಲ್ಲಿ ಈಗಾಗಲೇ ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಈಗಾಗಲೇ ರಣಚಂಡಿ ಮಳೆಗೆ ಹಲವರು ಬಲಿಯಾಗಿದ್ದಾರೆ. ಇದೀಗ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿವೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯನ್ನು ರಸ್ತೆಯಲ್ಲಿ ಸಾಗಿಸಲಾಗದೆ ಬಿದಿರಿಗೆ ಕಟ್ಟಿ ಆಸ್ಪತ್ರೆಗೆ ರವಾನಿಸಲಾಗಿದೆ.
ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದ್ದು, ವೃದ್ಧೆಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ ಈ ಹಿನ್ನೆಲೆಯಲ್ಲಿ ರಸ್ತೆಗಳು ಸಂಪೂರ್ಣವಾಗಿ ಮಳೆ ನೀರಿನಿಂದ ಕೂಡಿದ್ದು ಸಂಪೂರ್ಣವಾಗಿ ಕೆಸರುಮಯವಾಗಿದೆ. ಹಾಗಾಗಿ ವೃದ್ಧಿಯನ್ನು ಬಿದಿರಿನ ಕಟ್ಟಿಗೆಗೆ ಕಟ್ಟಿ ಕುಟುಂಬಸ್ಥರು ಆಸ್ಪತ್ರೆಗೆ ಹೊತ್ತೊಯ್ದಿರುವ ಘಟನೆ ನಡೆದಿದೆ.