ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೊರಬ ತಾಲ್ಲೂಕಿನಲ್ಲಿ ಮೇ.24ರ ನಾಳೆ, ಮೇ.26ರಂದು ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಾಳೆ ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಈ ಬಗ್ಗೆ ಮೆಸ್ಕಾಂನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 24-05-2025ರ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸೊರಬ ತಾಲ್ಲೂಕಿನ ಸೊರಬ ಟೌನ್, ಇಂಡಸ್ಟ್ರೀಯಲ್ ಫೀಡರ್, ತಾವರೇಹಳ್ಳಿ, ಕಕ್ಕರಸಿ, ನಡಹಳ್ಳಿ, ಕಲ್ಲಂಬಿ, ಕಡಸೂರು, ಯಲವಳ್ಳಿ, ಬಿಳಗಿ, ಮಂಚಿ, ಓಟೂರು, ಚಿಕ್ಕಾವಲಿ, ಸಾರೇಕೊಬ್ಬ ಹಾಗೂ ಬಳ್ಳಿಬೈಲು ವ್ಯಾಪ್ತಿಯಲ್ಲಿ ಪವರ್ ಕಟ್ ಆಗಲಿದೆ ಎಂದಿದೆ.
ಮೇ.26ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಇನ್ನೂ ಮೇ.26ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಉಳವಿ ವಿದ್ಯುತ್ ಸರಬರಾಜು ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ಮೇ.26ರಂದು ಪುರ, ಕಾನಳ್ಳಿ, ಉಳವಿ, ಹೊಸಬಾಳೆ, ದೂಗೂರು ವ್ಯಾಪ್ತಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ವರದಿ: ವಸಂತ ಬಿ ಈಶ್ವರಗೆರೆ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ಹೆಚ್.ಡಿ. ಕುಮಾರಸ್ವಾಮಿ
ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!